ಪ್ರತಿಭಟನಾ ನಿರತ ಆಶಾ ಕಾರ್ಯಕರ್ತೆಯರಿಗೆ ಸರ್ಕಾರದಿಂದ ಮತ್ತೊಮ್ಮೆ ಬರವಸೆ
ಮಹಾರಾಷ್ಟ್ರದ 36 ಜಿಲ್ಲೆಗಳ ಸಾವಿರಾರು ಮಹಿಳಾ ಆರೋಗ್ಯ ಕಾರ್ಯಕರ್ತೆಯರಾದ ಆಶಾಗಳು ಸಮಯಕ್ಕೆ ಸರಿಯಾಗಿ ಒಳ್ಳೆಯ ವೇತನ ನೀಡಲು ಅಧಿಕೃತ ಆದೇಶ ನೀಡುವಂತೆ ಸರ್ಕಾರವನ್ನು ಒತ್ತಾಯಿಸಿ ಹೋರಾಡಲು ಒಂದಾಗುತ್ತಿದ್ದಾರೆ. ನಗರದ ಆಜಾದ್ ಮೈದಾನದಲ್ಲಿ ಅವರು ಇತ್ತೀಚೆಗೆ 21 ದಿನಗಳ ಕಾಲ ಪ್ರತಿಭಟನೆ ನಡೆಸಿದ್ದರು. ಈ ಮಹಿಳಾ ಆರೋಗ್ಯ ಕಾರ್ಯಕರ್ತೆಯರ ಬೇಡಿಕೆಗಳನ್ನು ಪರಿಶೀಲಿಸುವುದಾಗಿ ಮತ್ತೊಮ್ಮೆ ಭರವಸೆ ನೀಡಿದ ನಂತರ ಹೋರಾಟವನ್ನು ಹಿಂತೆಗೆದುಕೊಳ್ಳಲಾಯಿತು. ಕಳೆದ ಆರು ತಿಂಗಳಲ್ಲಿ ಇದು ಮೂರನೇ ಬಾರಿಗೆ ಸರ್ಕಾರ ನೀಡಿದ ಅಧಿಕೃತ ಭರವಸೆಯಾಗಿದೆ, ಆದರೆ ಭರವಸೆಗಳು ಕಾಗದದಲ್ಲಿ ಮಾತ್ರ ಉಳಿದಿದೆ. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಮಹಿಳೆಯರು, ಅವರ ಒಗ್ಗಟ್ಟು ಮತ್ತು ತಮ್ಮ ಹಕ್ಕುಗಳಿಗಾಗಿ ಹೋರಾಡುವ ಅವರ ಕೆಚ್ಚಿನ ಕುರಿತು ಒಂದು ವರದಿ





















