ಪಳನಿ ಕುಮಾರ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಟಾಫ್ ಫೋಟೋಗ್ರಾಫರ್. ದುಡಿಯುವ ವರ್ಗದ ಮಹಿಳೆಯರು ಮತ್ತು ಅಂಚಿನಲ್ಲಿರುವ ಜನರ ಬದುಕನ್ನು ದಾಖಲಿಸುವುದರಲ್ಲಿ ಅವರಿಗೆ ಆಸಕ್ತಿ.
ಪಳನಿ 2021ರಲ್ಲಿ ಆಂಪ್ಲಿಫೈ ಅನುದಾನವನ್ನು ಮತ್ತು 2020ರಲ್ಲಿ ಸಮ್ಯಕ್ ದೃಷ್ಟಿ ಮತ್ತು ಫೋಟೋ ದಕ್ಷಿಣ ಏಷ್ಯಾ ಅನುದಾನವನ್ನು ಪಡೆದಿದ್ದಾರೆ. ಅವರು 2022ರಲ್ಲಿ ಮೊದಲ ದಯನಿತಾ ಸಿಂಗ್-ಪರಿ ಡಾಕ್ಯುಮೆಂಟರಿ ಫೋಟೋಗ್ರಫಿ ಪ್ರಶಸ್ತಿಯನ್ನು ಪಡೆದರು. ಪಳನಿ ತಮಿಳುನಾಡಿನ ಮ್ಯಾನ್ಯುವಲ್ ಸ್ಕ್ಯಾವೆಂಜಿಗ್ ಪದ್ಧತಿ ಕುರಿತು ಜಗತ್ತಿಗೆ ತಿಳಿಸಿ ಹೇಳಿದ "ಕಕ್ಕೂಸ್" ಎನ್ನುವ ತಮಿಳು ಸಾಕ್ಷ್ಯಚಿತ್ರಕ್ಕೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ.