ಅತೀ ಕಡಿಮೆ ಸಂಬಳ ಮತ್ತು ಅಷ್ಟನ್ನೂ ಹಲವು ತಿಂಗಳುಗಳಿಂದ ಸರಕಾರದಿಂದ ಪಡೆಯದಿರುವ ಹೊರತಾಗಿಯೂ ಸರಕಾರಿ ಶಿಶುವಿಹಾರ ಕೇಂದ್ರಗಳಾದ ಅಂಗನವಾಡಿಯ ಶಿಕ್ಷಕಿಯರು, ಭಾರತದ ಲಕ್ಷಾಂತರ ಮಕ್ಕಳಿಗೆ ಶಿಕ್ಷಣದ ಭಾಗ್ಯವನ್ನು ನೀಡುತ್ತಿದ್ದಾರೆ. ಕರ್ನಾಟಕ ಸರ್ಕಾರವಂತೂ ಅಂಗನವಾಡಿ ಶಿಕ್ಷಕಿಯರಿಗೆ ಸಂಬಳವನ್ನು ನೀಡದೆ ತಿಂಗಳುಗಳೇ ಕಳೆದಿವೆ. ಶಿಕ್ಷಕರ ದಿನಕ್ಕಾಗಿ 'ಪರಿ' ಪ್ರಸ್ತುತಪಡಿಸುತ್ತಿರುವ ವರದಿಯೊಂದು ಇಲ್ಲಿದೆ.
ಪ್ರೀತಿ ಡೇವಿಡ್ ಅವರು ಪರಿಯ ಕಾರ್ಯನಿರ್ವಾಹಕ ಸಂಪಾದಕರು. ಪತ್ರಕರ್ತರು ಮತ್ತು ಶಿಕ್ಷಕರಾದ ಅವರು ಪರಿ ಎಜುಕೇಷನ್ ವಿಭಾಗದ ಮುಖ್ಯಸ್ಥರೂ ಹೌದು. ಅಲ್ಲದೆ ಅವರು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮದಲ್ಲಿ ಆಳವಡಿಸಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ ಮತ್ತು ನಮ್ಮ ಕಾಲದ ಸಮಸ್ಯೆಗಳನ್ನು ದಾಖಲಿಸುವ ಸಲುವಾಗಿ ಯುವಜನರೊಂದಿಗೆ ಕೆಲಸ ಮಾಡುತ್ತಾರೆ.
Author
Vishaka George
ವಿಶಾಖಾ ಜಾರ್ಜ್ ಪರಿಯಲ್ಲಿ ಹಿರಿಯ ಸಂಪಾದಕರಾಗಿದ್ದಾರೆ. ಅವರು ಜೀವನೋಪಾಯ ಮತ್ತು ಪರಿಸರ ಸಮಸ್ಯೆಗಳ ಬಗ್ಗೆ ವರದಿ ಮಾಡುತ್ತಾರೆ. ವಿಶಾಖಾ ಪರಿಯ ಸಾಮಾಜಿಕ ಮಾಧ್ಯಮ ಕಾರ್ಯಗಳ ಮುಖ್ಯಸ್ಥರಾಗಿದ್ದಾರೆ ಮತ್ತು ಪರಿಯ ಕಥೆಗಳನ್ನು ತರಗತಿಗೆ ತೆಗೆದುಕೊಂಡು ಹೋಗಲು ಮತ್ತು ವಿದ್ಯಾರ್ಥಿಗಳು ತಮ್ಮ ಸುತ್ತಲಿನ ಸಮಸ್ಯೆಗಳನ್ನು ದಾಖಲಿಸಲು ಸಹಾಯ ಮಾಡಲು ಎಜುಕೇಷನ್ ತಂಡದಲ್ಲಿ ಕೆಲಸ ಮಾಡುತ್ತಾರೆ.
Translator
Prasad Naik
ಅನುವಾದಕರು: ಪ್ರಸ್ತುತ ಹರಿಯಾಣಾದ ಗುರುಗ್ರಾಮದಲ್ಲಿ ನೆಲೆಸಿರುವ ಪ್ರಸಾದ್ ನಾಯ್ಕ್ ರಿಪಬ್ಲಿಕ್ ಆಫ್ ಅಂಗೋಲಾ (ಆಫ್ರಿಕಾ) ದಲ್ಲಿ ಕುಡಿಯುವ ನೀರು ಸರಬರಾಜು ಯೋಜನೆಯೊಂದರಲ್ಲಿ ಕೆಲ ವರ್ಷಗಳ ಕಾಲ ಸೇವೆ ಸಲ್ಲಿಸಿದವರು. ಪ್ರಸಾದ್ ನಾಯ್ಕ್ ಹವ್ಯಾಸಿ ಬರಹಗಾರರು, ಅಂಕಣಕಾರರು ಮತ್ತು "ಹಾಯ್ ಅಂಗೋಲಾ!" ಕೃತಿಯ ಲೇಖಕರು. 'ಅವಧಿ' ಅಂತರ್ಜಾಲ ಪತ್ರಿಕೆಯಲ್ಲಿ ಇವರು ಬರೆದಿರುವ ಲೇಖನಗಳು ಜನಪ್ರಿಯ. ಇವರನ್ನು prasad1302@gmail.com ಇ-ಮೈಲ್ ಮೂಲಕ ಸಂಪರ್ಕಿಸಬಹುದು.